ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ದಾಳಿ 5ನೇ ದಿನವೂ ಮುಂದುವರೆದಿದ್ದು, ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಅಯೋಮಯವಾಗಿದೆ. ರಷ್ಯಾ ದಾಳಿಯಿಂದ ಕಂಗೆಟ್ಟ ವಿದ್ಯಾರ್ಥಿಗಳು ಹಾಸ್ಟೇಲ್ ಬಂಕರ್, ಮೆಟ್ರೋ ಸುರಂಗಗಳಲ್ಲಿ ಆಶ್ರಯ ಪಡೆದು ಜೀವ ರಕ್ಷಿಸಿಕೊಳ್ಳುತಿದ್ದಾರೆ. ಆದರೆ ಆಹಾರ, ನೀರು ಸಿಗದೇ ಪರದಾಡುತ್ತಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸಿ ಎಂದು ಮನವಿ ಮಾಡಿದ್ದಾರೆ.
ಜೂನ್ ತಿಂಗಳಲ್ಲಿ ಕೊರೋನಾ ನಾಲ್ಕನೇ ಅಲೆ; ಐಐಟಿ ಸಂಶೋಧನೆಯಲ್ಲಿ ಬಯಲಾದದ್ದೇನು….?
ಉಕ್ರೇನ್ ನಲ್ಲಿ 400ಕ್ಕೂ ಹೆಚ್ಚು ಕನ್ನಡಿಗ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈಗಾಗಲೇ 42 ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಚುರುಕುಗೊಳ್ಳಬೇಕಿದೆ. ಈ ನಿಟ್ಟಿನಲ್ಲಿಯೂ ಪತ್ರದಲ್ಲಿ ಉಲ್ಲೇಖಿಸಿರುವ ಮಾಜಿ ಪ್ರಧಾನಿ ದೇವೇಗೌಡರು, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕು. ಕಳೆದ ಐದು ದಿನಗಳಿಂದ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.