ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ದೇಶಾದ್ಯಂತ ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಪ್ರತಿಭಟನಾ ನಿರತ ರೈತನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಸಿಂಘು ಗಡಿಯಲ್ಲಿ ನಡೆದಿದೆ.
ಕೃಷಿ ಕಾಯ್ದೆ ವಿರೋಧಿಸಿ ಹರಿಯಾಣ-ದೆಹಲಿ ನಡುವಿನ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾ ನಿರತ ರೈತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
BIG NEWS: ರೈತ ಸಂಘಟನೆಗಳಿಂದ ಬೃಹತ್ ಕಾಲ್ನಡಿಗೆ ಜಾಥಾ ಆರಂಭ; ಕಂದಾಯ ಭವನಕ್ಕೆ ಮುತ್ತಿಗೆ ಹಾಕಲು ಯತ್ನ; ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್
ಇನ್ನೊಂದೆಡೆ ದೆಹಲಿ-ಗುರುಗ್ರಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಮತ್ತೊಂದೆಡೆ ದೆಹಲಿಯ ಘಾಜಿಪುರ್ ಗಡಿ ಪ್ರದೇಶದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ಮತ್ತು ದೆಹಲಿ ನಡುವೆ ಸಂಚಾರ ಮಾರ್ಗ ಬಂದ್ ಆಗಿದೆ.