ವಿಜಯನಗರ: ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಹಿನ್ನೆಯಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯ ಬೇಕಿದ್ದ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
BIG NEWS: ಗರ್ಭಪಾತ ಮಿತಿ ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದ ಸರ್ಕಾರ
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಪದವಿ, ಸ್ನಾತಕೋತ್ತರ, Bed ಪರೀಕ್ಷೆಗಳು ಕೂಡ ಮುಂದೂಡಲ್ಪಟ್ಟಿವೆ. ಇನ್ನು ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿವಿ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ ಎಂದು ವಿವಿ ಆದೇಶ ಹೊರಡಿಸಿದೆ.