alex Certify BIG NEWS: ಭಾರಿ ಮಳೆಗೆ ಕುಸಿದ ಮನೆ ಮೇಲ್ಛಾವಣಿ; ವೃದ್ಧೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆಗೆ ಕುಸಿದ ಮನೆ ಮೇಲ್ಛಾವಣಿ; ವೃದ್ಧೆ ದುರ್ಮರಣ

ಕಲಬುರ್ಗಿ: ಕಲಬುರ್ಗಿಯಲ್ಲಿ ಸಂಭವಿಸಿದ ಭಾರಿ ಮಳೆ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಳೆ ಅವಾಂತರದಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ವೃದ್ಧೆಯೋರ್ವರು ಸಾವನ್ನಪ್ಪಿದ್ದಾರೆ.

ಕಲಬುರ್ಗಿಯ ಚಿತ್ತಾಪುರ ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆರೀಫಾ ಬೇಗಂ (60) ಮೃತ ಮಹಿಳೆ. ತಡರಾತ್ರಿ ಕಲಬುರ್ಗಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ಮಲಗಿದ್ದ ವೃದ್ಧೆಯ ಮೇಲೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ.

ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರೀಫಾ ಬೇಗಂ ಮೃತಪಟ್ಟಿದ್ದಾರೆ. ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...