ಕಲಬುರ್ಗಿ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಕಲಬುರ್ಗಿ, ತುಮಕೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ.
ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಆರ್ಭಟಕ್ಕೆ ನದಿ, ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿವೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ರಸ್ತೆ ಮಾರ್ಗಗಳಲ್ಲಿ ನದಿಯಂತೆ ನೀರು ಹರಿಯುತ್ತಿವೆ.
ಭಾರಿ ಮಳೆ ನಡುವೆ ಜಮೀನಿಗೆ ಹೋಗಿದ್ದ ಮಹಿಳೆಯೊಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಮಹಿಳೆಯ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಶ್ರೀದೇವಿ ಪೂಜಾರ ಮೃತ ಮಹಿಳೆ. ಇನ್ನೊಂದೆಡೆ ಆಳಂದ ತಾಲೂಕಿನ ಖಜೂರಿ-ತಡೋಳ ಗ್ರಾಮಗಳು ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಕೃಷಿ ಭೂಮಿ ಜಲಾವೃತಗೊಂಡಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.