ರಾಯಚೂರು: ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಇಂದು ಕೊಂಚ ತಣ್ಣಗಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಬೆಳೆಗಳು ಸಂಪೂರ್ಣ ನೀರುಪಾಲಾಗಿವೆ. ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.
ಅತಿವೃಷ್ಟಿ ಅವಾಂತರದಿಂದಾಗಿ ಬೆಳೆಗಳನ್ನು ಕಳೆದುಕೊಂಡ ರೈತನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಭೋಗಾಪುರದಲ್ಲಿ ನಡೆದಿದೆ.
ಬಂದ್ ಆಗ್ಬಹುದು ನಿಮ್ಮ ಬ್ಯಾಂಕ್ ಸೇವೆ….! ಗ್ರಾಹಕರಿಗೆ ಎಚ್ಚರಿಕೆ ನೀಡಿದ SBI
ರೈತ ವೀರನಗೌಡ ಮಾಲಿ ಪಾಟೀಲ್ (55) ಆತ್ಮಹತ್ಯೆಗೆ ಶರಣಾದ ರೈತ. 8 ಎಕರೆಯಲ್ಲಿ ಬೆಳೆದಿದ್ದ ಭತ್ತ ಅಕಾಲಿಕ ಮಳೆಯಿಂದಾಗಿ ಸಂಪೂರ್ಣ ನೆಲಕ್ಕಚ್ಚಿದ್ದು, ಸಾಲ ತೀರಿಸುವುದು ಹೇಗೆಂದು ಕಂಗಾಲಾದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.