alex Certify BIG NEWS: ಭಾರಿ ಮಳೆ ಅವಾಂತರ; ರಸ್ತೆಯ ಮೇಲೆ ಪ್ರವಾಹದಂತೆ ಹರಿಯುತ್ತಿರುವ ನೀರು; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆ ಅವಾಂತರ; ರಸ್ತೆಯ ಮೇಲೆ ಪ್ರವಾಹದಂತೆ ಹರಿಯುತ್ತಿರುವ ನೀರು; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಬೆಂಗಳೂರು: ವರುಣಾರ್ಭಟದ ಅವಾಂತರದಿಂದಾಗಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯೇ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಸಬೂದನೂರಿನಲ್ಲಿ ಕೋಡಿ ಒಡೆದ ಪರಿಣಾಮ ದಶಪಥ ರಸ್ತೆಗೆ ನೀರು ನುಗ್ಗಿದ್ದು, ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರವಾಹದ ರಿತಿಯಲ್ಲಿ ನೀರು ಹರಿಯುತ್ತಿದೆ. ಸುತ್ತಮುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗೂ ನದಿಗೂ ವ್ಯತ್ಯಾಸವೇ ಗೊತ್ತಾಗದಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ಮದ್ದೂರು ಮಾರ್ಗದಲ್ಲಿ ಸಂಚಾರ ಬಂದ್ ಆಗಿರುವುದರಿಂದ ಮೈಸೂರು-ಬೆಂಗಳೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಬದಲಿಮಾರ್ಗ ಅನುಸರಿಸುವಂತೆ ಪೊಲೀಸರು ಸೂಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...