ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟದ ನಡುವೆಯೇ ಭೂಕಂಪ ಸಂಭವಿಸಿದೆ.
ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ಆತಂಕಕ್ಕೀಡಾದ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಬೆಳಿಗ್ಗೆ 9:12ರ ಸುಮಾರಿಗೆ ಭೂಮಿ ಕಂಪಿಸಿದ್ದು, 3-4 ಸೆಂಡುಗಳ ಕಾಲ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ.