alex Certify BIG NEWS: ಭಾರಿ ಮಳೆ: ಬೆಂಗಳೂರು-ಮೈಸೂರು ಹೆದ್ದಾರಿ ಮತ್ತೆ ಬಂದ್; ಬದಲಿ ಮಾರ್ಗದಲ್ಲಿ ತೆರಳಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆ: ಬೆಂಗಳೂರು-ಮೈಸೂರು ಹೆದ್ದಾರಿ ಮತ್ತೆ ಬಂದ್; ಬದಲಿ ಮಾರ್ಗದಲ್ಲಿ ತೆರಳಲು ಸೂಚನೆ

ರಾಮನಗರ; ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ರಾಮನಗರ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಕೆರೆಕೋಡಿ ಒಡೆದು ರಸ್ತೆಗಳು ಜಲಾವೃತಗೊಂಡಿವೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ರಾಮನಗರದಾದ್ಯಂತ ಭಾರಿ ಮಳೆಯಿಂದಾಗಿ ಕೆರೆಗಳು ಕೋಡಿಬಿದ್ದು, 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ನದಿಗಳಂತಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ.

ಇನ್ನು ಮಳೆಯಿಂದಾಗಿ ಚೆನ್ನಪಟ್ಟಣ ಟೌನ್ ನ ತಟ್ಟೆಕೆರೆ ಬಳಿ ರಸ್ತೆ ಬಿರುಕು ಬಿಟ್ಟಿದೆ. ಕೆರೆ ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಪ್ರವಾಹದಂತೆ ಹರಿದು ಬರುತ್ತಿದ್ದು ವಾಹನ ಸಂಚಾರ ಕಷ್ಟಸಾಧ್ಯವಾಗಿದೆ. ಮಳೆ ಅವಾಂತರದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಸಂಚರಿಸುವವರು ಮುಂದಿನ ಮೂರು ದಿನಗಳ ಕಾಲ ಬದಲಿ ಮಾರ್ಗದಲ್ಲಿ ತೆರಳುವಂತೆ ರಾಮನಗರ ಜಿಲ್ಲಾ ಪೊಲೀಸರು ಸೂಚಿಸಿದ್ದಾರೆ.

ಬೆಂಗಳೂರು-ಕನಕಪುರ-ಮೈಸೂರು ಹೆದ್ದಾರಿ ಬದಲು ಬೆಂಗಳೂರು-ಕುಣಿಗಲ್-ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಮನವಿ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...