ನವದೆಹಲಿ: ದೇಶಾದ್ಯಂತ ವಿಪರೀತ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಜನವರಿ 24 ರಿಂದ ವ್ಯಾಪಕ ಮಳೆಯಾಗಲಿದೆ. ಪರ್ವತ ಪ್ರದೇಶಗಳಲ್ಲಿ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜಮ್ಮು-ಕಾಶ್ಮೀರ, ಉತ್ತರಾಖಂಡ, ಹಿಮಾಚಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಸೇನ್ ರಾಯ್ ಮಾಹಿತಿ ನೀಡಿದ್ದಾರೆ.
ಮಂಡಿ, ಕಾಂಗ್ರಾ, ಚಂಬಾ, ಶಿಮ್ಲಾ, ಕುಲು, ಲಾಹೌಲ್ ಸ್ಪತಿ, ಕಿನ್ನೌರ್ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಹಾಗೂ ಹಿಮಪಾತ ಸಂಭವಿಸಲಿದೆ. ಜನವರಿ 25ರವರೆಗೆ ಬೆಟ್ಟ ಪ್ರದೇಶಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ ಕೆಲ ದಿನಗಳವರೆಗೆ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.