alex Certify BIG NEWS: ಭಾರಿ ಮಳೆ; ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆ; ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ನ.23ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 48 ಗಂಟೆ ಧಾರಾಕಾರ ಮಳೆಯಾಗಲಿದ್ದು, ನ.24ರವರೆಗೂ ಮೋಡಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...