ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.