alex Certify BIG NEWS: ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಉಡುಪಿ: ಲಾರಿ ಓವರ್ ಟೇಕ್ ಮಾಡಲು ಹೋಗಿ ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ವಿದ್ಯಾರ್ಥಿಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ 19 ವರ್ಷದ ಸಮಿತ್ ಕುಮಾರ್ ಹಾಗೂ ವಾಗೀಶ್ ಕೆದ್ಲಾಯ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳಿಬ್ಬರೂ ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಡುತ್ತಿದ್ದರು. ಬ್ರಹ್ಮಾವರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...