ಲಖನೌ: ಕಾಶಿ ಯಾತ್ರೆಗೆ ತೆರಳಿದ್ದ ಬೀದರ್ ಜಿಲ್ಲೆಯ ಒಂದೇ ಕುಟುಂಬದ 7 ಜನ ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾಶಿಯಿಂದ ಅಯೋಧ್ಯೆಗೆ ಟೆಂಪೋ ಟ್ರಾವಲರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಉತ್ತರ ಪ್ರದೇಶದ ಲಖೀಂ ಪುರ ಬಳಿ ಟೆಂಪೋ ಟ್ರಾವಲರ್ ಲಾರಿಗೆ ಡಿಕ್ಕಿ ಹೊಡೆದಿದೆ. ಮತ್ತೊಂದು ವಾಹನ ಓವರ್ ಟೇಕ್ ಮಾಡಲು ಹೋಗಿ ಈ ದುರಂತ ಸಂಭವಿಸಿದೆ. ಟೆಂಪೊದಲ್ಲಿದ್ದ ಕರ್ನಾಟಕದ 7 ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 9 ಜನರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಬೀದರ್ ಜಿಲ್ಲೆಯ ಗುಂಪಾ ಕಾಲೋನಿಯ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.