alex Certify BIG NEWS: ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಳಗಾವಿ; ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ.

ಇಲ್ಲಿನ ಸ್ಥವನಿಧಿ ಘಾಟ್ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನ ಚಾಲಕ ಅದಗೊಂಡು ಬಾಬು (60), ಪತ್ನಿ ಛಾಯಾ (55), ಚಂಪಾತಾಯಿ ಮಗದುಮ್ (80) ಹಾಗೂ ಮಹೇಶ್ ಪಾಟೀಲ್ (23) ಮೃತರು. ನಿಪ್ಪಾಣಿಯಿಂದ ಸ್ಥವನಿಧಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ನಿಪ್ಪಾಣಿ ಪೊಲಿಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...