ಕೊಪ್ಪಳ: ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.
ದೇವತಿ ಸಿಂಗ್ ಹಾಗೂ ಅಜಿತ್ ಸಿಂಗ್ ಮೃತರು. ಕಾರಿನಲ್ಲಿದ್ದ ಶ್ವೇತಾ ಆದ್ಯಾ ಹಾಗೂ ಆರೋಹಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್ ನಿಂದ ಕೊಪ್ಪಳಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.