ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ.
ಹೋಂಡಾ ಆಕ್ಟಿವಾದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದಾರೆ. ಅಷ್ಟರಲ್ಲಿ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಹಿಳೆ ಕೆಳಗೆಬಿದ್ದಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದಿದೆ.
ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.