alex Certify BIG NEWS: ಭೀಕರ ಅಪಘಾತ; 6 ಉದ್ಯೋಗಿಗಳು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; 6 ಉದ್ಯೋಗಿಗಳು ದುರ್ಮರಣ

ಒಡಿಶಾ: ಟ್ರಕ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಕ್ಕು ಹಾಗೂ ವಿದ್ಯುತ್ ಸ್ಥಾವರದ 6 ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಒಡಿಶಾದ ಜಾರ್ಸುಗುಡದಲ್ಲಿ ನಡೆದಿದೆ.

ಸಂಬಲ್ ಪುರ-ಜಾರ್ಸುಗುಡ ಬಿಜು ಎಕ್ಸ್ ಪ್ರೆಸ್ ವೇಯಲ್ಲಿ ಈ ದುರಂತ ಸಂಭವಿಸಿದ್ದು, ಪೊಲೀಸರ ಪ್ರಕಾರ ಕಾರ್ಮಿಕರು ಪ್ಲಾಟ್ ಸೈಟ್ ನಿಂದ ಜಾರ್ಸುಗುಡಾ ಪಟ್ಟಣಕ್ಕೆ ಬಸ್ ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 6 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬುರ್ಲಾದ ವೀರ್ ಸುರೇಂದ್ರ ಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಾರ್ಸುಗುಡ ಉಪ ಪೊಲೀಸ್ ವರಿಷ್ಠಾಧಿಕಾರಿ ಎನ್.ಮಹಾಪಾತ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...