alex Certify BIG NEWS: ಭೀಕರ ಅಪಘಾತ; BBMP ಹೆಲ್ತ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; BBMP ಹೆಲ್ತ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ನಡೆದಿದೆ.

ಪ್ರಶಾಂತ್ ನಾಯಕ್ (27) ಮೃತ ಹೆಲ್ತ್ ಇನ್ಸ್ ಪೆಕ್ಟರ್. ಸ್ಯಾಂಕಿ ಕೆರೆಯ ಟಿ.ಚೌಡಯ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪ್ರಶಾಂತ್ ನಾಯಕ್ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಪುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪ್ರಶಾಂತ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜೆ.ಪಿ. ನಗರ ನಿವಾಸಿಯಾಗಿರುವ ಪ್ರಶಾಂತ್ ನಾಯಕ್, ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...