ಹೈದರಾಬಾದ್: ಟಾಲಿವುಡ್ ನಟ, ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ ಸಾಯಿ ಧರಮ್ ತೇಜ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಯಿ ಧರಮ್ ತೇಜ್ ಎದೆ, ಹೊಟ್ಟೆ, ಬಲಗಣ್ಣು ಭಾಗಕ್ಕೆ ತೀವ್ರವಾದ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಈ ನಡುವೆ ಆಸ್ಪತ್ರೆಗೆ ಭೇಟಿ ನೀಡಿರುವ ನಟ ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಆರೋಗ್ಯದ ಮಾಹಿತಿ ಪಡೆದಿದ್ದೆನೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ಹೆದರುವಂಥದ್ದೇನಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ನಟ ಚಿರಂಜೀವಿ ಕೂಡ ಟ್ವೀಟ್ ಮೂಲಕ ಸಾಯಿ ಧರಮ್ ತೇಜಗೆ ಸಣ್ಣ ಪುಟ್ಟಗಾಯಗಳಾಗಿವೆ. ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ತಡರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಬ್ರಿಡ್ಜ್ ಬಳಿ ಸಾಯಿ ಧರಮ್ ತೇಜ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಸ್ಕಿಡ್ ಆಗಿ ಬೈಕ್ ಅಪಘಾತ ಸಂಭವಿಸಿದೆ. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಅವರನ್ನು ತಕ್ಷಣ ಅಪೋಲೋ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.