alex Certify BIG NEWS: ಭೀಕರ ರಸ್ತೆ ಅಪಘಾತ; ನಟಿ ಸುನೇತ್ರಾ ಪಂಡಿತ್ ಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ರಸ್ತೆ ಅಪಘಾತ; ನಟಿ ಸುನೇತ್ರಾ ಪಂಡಿತ್ ಗೆ ಗಂಭೀರ ಗಾಯ

ಬೆಂಗಳೂರು: ಕಿರುತೆರೆ ಖ್ಯಾತ ನಟಿ, ಡಬ್ಬಿಂಗ್ ಆರ್ಟಿಸ್ಟ್ ಸುನೇತ್ರಾ ಪಂಡಿತ್ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅವೈಜ್ಞಾನಿಕ ಹಂಪ್ ಹಾಗೂ ರಸ್ತೆ ಗುಂಡಿಯಿಂದಾಗಿ ಬೈಕ್ ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಎನ್ ಆರ್ ಕಾಲೋನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸುನೇತ್ರಾ ಪಂಡಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ತೀವ್ರ ರಕ್ತಸ್ರಾವದಿಂದ ಪರದಾಡುತ್ತಿದ್ದ ಸುನೇತ್ರಾ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸವನಗುಡಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...