alex Certify BIG NEWS: ಭೀಕರ ಸರಣಿ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಸರಣಿ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಒಂದು ಕಾರು ಹಾಗೂ ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆ ಬಳಿಯ ಇಟ್ಟಮಡುವಿನಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಮೊದಲು ಮೂವರು ಪಾದಚಾರಿಗಳಿಗೆ ಗುದ್ದಿದೆ, ನಂತರ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ಪಾದಚಾರಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿಮ್ಲಾ, ಕುಲುಗಿಂತ ತಂಪಾಯಿತು ಸಿಲಿಕಾನ್‌ ಸಿಟಿ ಬೆಂಗಳೂರು

28 ವರ್ಷದ ಸುರೇಶ್ ಮೃತ ದುರ್ದೈವಿ. ಸಚಿನ್ ಹಾಗೂ ಶೈಲೇಂದ್ರ ಎಂಬುವವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರು ಚಾಲಕ ಮುಖೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...