alex Certify BIG NEWS: ಭೀಕರ ಸರಣಿ ಅಪಘಾತ; ಮಗು, ಮಹಿಳೆ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಸರಣಿ ಅಪಘಾತ; ಮಗು, ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಭೀಕರ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಬೈಕ್ ಹಾಗೂ ಮೂರು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಭಾರತಿ ಪೂಜೇರಿ ಎಂಬ ಮಹಿಳೆ ಹಾಗೂ 6 ವರ್ಷದ ಮಗು ಸಾವನ್ನಪ್ಪಿದ್ದಾರೆ. ಅನಿಲ್ ಪೂಜೇರಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಮಹಿಳೆ ಹಾಗೂ ಮಗು ಬೈಲಹೊಂಗಲ ಮೂಲದವರು ಎನ್ನಲಾಗಿದೆ. ಹುಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...