ನವದೆಹಲಿ: ಬೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪಿ.ವರವರ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ 84 ವರ್ಷದ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಕ್ಕಾಗಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ವೈದ್ಯಕೀಯ ಕಾರಣಕ್ಕಾಗಿ ಶಾಶ್ವತ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ವರವರ ರಾವ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ವರವರ ರಾವ್ ಅವರ ವಿಶೇಷ ರಜೆ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಯು.ಯು ಲಲಿತ್, ಅನಿರುದ್ಧ ಬೋಸ್ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಜಾಮೀನು ಮಂಜೂರು ಮಾಡಿದೆ.