ಬೆಂಗಳೂರು: ಕಾಂಗ್ರೆಸ್ ನಿಂದ ‘ಸೇ ಸಿಎಂ’ ಪೋಸ್ಟರ್ ಅಭಿಯಾನ ವಿಚಾರವಾಗಿ ಕಿಡಿಕಾರಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಬಿಜೆಪಿ ಅಭಿವೃದ್ಧಿ ಸಹಿಸಲಾಗದೇ ಕಾಂಗ್ರೆಸ್ ನಾಯಕರು ಅನಗತ್ಯ ಅಭಿಯಾನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ. ಪಾಟೀಲ್, ಪೇ ಸಿಎಂ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದರು. ಈಗ ಸೇ ಸಿಎಂ ಅಭಿಯಾನ ನಡೆಸುತ್ತಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಾಗಿದೆ ಕಾಂಗ್ರೆಸ್ ಕಥೆ ಎಂದು ಟೀಕಿಸಿದರು.
ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ನೋಡಿ ಕಾಂಗ್ರೆಸ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ನೆಲೆ ಇಲ್ಲದಂತಾಗಲಿದೆ ಎಂದು ಕಿಡಿಕಾರಿದರು.