ಬೆಂಗಳೂರು: ತಮ್ಮ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪ ಸತ್ಯಕ್ಕೆ ದೂರವಾದದ್ದು. ಇದೊಂದು ಷಡ್ಯಂತ್ರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಎಫ್ ಐ ಆರ್ ದಾಖಲಿಸಿ ತನಿಖೆಗೆ ಆದೇಶ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಯಡಿಯೂರಪ್ಪ, ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಇದು ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ ಎಂದು ಹೇಳಿದರು.
ಇದರ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲ್ಲ. ನನಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದರು.