alex Certify BIG NEWS: ಮಂಗಳವಾರ ಸಂಜೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ಜನರಿಗೆ ಕಿರಿಕಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳವಾರ ಸಂಜೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ಜನರಿಗೆ ಕಿರಿಕಿರಿ

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ವಾರಗಳೇ ಕಳೆದರೂ ಸಹ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿಲ್ಲ. ಹೀಗಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಿದ್ಧವಾಗಿದ್ದ ಸಮುದಾಯ ಆತಂಕವನ್ನು ಎದುರಿಸುತ್ತಿದೆ.

ಇದರ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ಸುರಿದ ಮಳೆಯಿಂದಾಗಿ ಜನತೆ ಕಿರಿಕಿರಿ ಅನುಭವಿಸುತ್ತಿದ್ದಾರೆ. ಏಕಾಏಕಿ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಕಚೇರಿಯಿಂದ ಮನೆಗೆ ತೆರಳುತ್ತಿದ್ದರು ಸಂಕಷ್ಟ ಎದುರಿಸಿದ್ದಾರೆ.

ಮೆಜೆಸ್ಟಿಕ್, ಗಾಂಧಿನಗರ, ಚಾಮರಾಜಪೇಟೆ, ವಿಧಾನಸೌಧ, ಹಲಸೂರು, ಕೆಆರ್ ಸರ್ಕಲ್, ಶೇಷಾದ್ರಿಪುರಂ, ಕಾರ್ಪೊರೇಷನ್, ಶಿವಾನಂದ ಸರ್ಕಲ್ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...