ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣದ ತನಿಖೆ ಮುಂದುವರೆದಿದ್ದು, ಇದರ ಮಧ್ಯೆ ಡಿಜಿ – ಐಜಿಪಿ ಪ್ರವೀಣ್ ಸೂದ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ.
ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸುತ್ತಿದ್ದು, ಕುಕ್ಕರ್ ಬಾಂಬ್ ಸ್ಫೋಟದ ಪ್ರಕರಣದ ತನಿಖೆ ಪ್ರಗತಿ ಕುರಿತು ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.
ಇದರ ಮಧ್ಯೆ ಕುಕ್ಕರ್ ಬಾಂಬ್ ಸ್ಫೋಟದ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಶಾರಿಕ್ ಗೆ ಚಿಕಿತ್ಸೆ ಮುಂದುವರೆದಿದ್ದು, ಆತ ಚೇತರಿಸಿಕೊಂಡ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.