ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರು ಏರ್ಪೋರ್ಟ್ ರನ್ ವೇ ಬದಿಯಲ್ಲಿಯೇ ರಸ್ತೆ ಕುಸಿದು ಹೋಗಿದೆ. ಅದ್ಯಪಾಡಿ ಬಳಿ ಇರುವ ರನ್ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಆಗಿದೆ. ರಸ್ತೆ ಬಹು ದೊಡ್ಡ ಮಟ್ಟದಲ್ಲಿ ಕುಸಿತ ಪರಿಣಾಮ ಏರ್ ಪೋರ್ಟ್ ಸುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬಜ್ಪೆ ಏರ್ಪೋರ್ಟ್ ರನ್ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೇ ಇಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ನೀರು ತುಂಬಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದೂ ಹೇಳಲಾಗ್ತಿದೆ.
ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮಿತಿ ಮೀರಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.