alex Certify BIG NEWS: ಮಂಗಳೂರು ಏರ್​ಪೋರ್ಟ್ ರನ್​ ವೇ ಬಳಿ ರಸ್ತೆ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಏರ್​ಪೋರ್ಟ್ ರನ್​ ವೇ ಬಳಿ ರಸ್ತೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರು ಏರ್​ಪೋರ್ಟ್​ ರನ್​ ವೇ ಬದಿಯಲ್ಲಿಯೇ ರಸ್ತೆ ಕುಸಿದು ಹೋಗಿದೆ. ಅದ್ಯಪಾಡಿ ಬಳಿ ಇರುವ ರನ್​ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್​​ ಆಗಿದೆ. ರಸ್ತೆ ಬಹು ದೊಡ್ಡ ಮಟ್ಟದಲ್ಲಿ ಕುಸಿತ ಪರಿಣಾಮ ಏರ್​ ಪೋರ್ಟ್ ಸುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬಜ್ಪೆ ಏರ್​ಪೋರ್ಟ್​ ರನ್​ ವೇ ಸಮೀಪದಲ್ಲಿಯೇ ಇರುವ ರಸ್ತೆ ಇದಾಗಿದೆ. ರನ್​ ವೇನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮವಾಗಿ ರಸ್ತೆ ಕುಸಿದೆ ಎಂದು ಅದ್ಯಪಾಡಿಯ ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೇ ಇಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ನೀರು ತುಂಬಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದೂ ಹೇಳಲಾಗ್ತಿದೆ.

ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮಿತಿ ಮೀರಿದ್ದು ರೆಡ್​ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...