ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ-ಎನ್ ಐ ಎ ಎಫ್ಐಆರ್ ದಾಖಲಿಸಿದೆ.
ಮಂಗಳೂರಿನ ಕಂಕನವಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆಟೋ ಚಾಲಕ ಹಾಗೂ ಶಂಕಿತ ಉಗ್ರ ಶಾರಿಕ್ ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಶಂಕಿತ ಉಗ್ರ ಮಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಎನ್ನಲಾಗಿದೆ. ರಾಷ್ಟ್ರದ ಭದ್ರತೆಗೆ ಧಕ್ಕೆ ತರುವ ಪ್ರಕರಣ ಇದಾಗಿರುವುದರಿಂದ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಎನ್ ಐ ಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿ ಶಂಕಿತ ಉಗ್ರ ಶಾರಿಕ್ ಮೈಸೂರಿನಲ್ಲಿ ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಹಾಗೂ ಮಂಗಳೂರಿನ ಹಲವು ಪ್ರದೇಶಗಳನ್ನು ಎನ್ ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.