alex Certify BIG NEWS: ಮಂಗಳೂರು ಸ್ಫೋಟ ಪ್ರಕರಣ; ಮತ್ತೆ ಮೂವರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಸ್ಫೋಟ ಪ್ರಕರಣ; ಮತ್ತೆ ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶಂಕಿತ ಉಗ್ರ ಶಾರಿಕ್ ನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಂಕನವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಶಾರಿಕ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೂವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಆಟೋ ಚಾಲಕ ಪುರುಷೋತ್ತಮ್ ನೀಡಿರುವ ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...