
ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರಿಕ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶಾರಿಕ್ ಒಂದು ಕಣ್ಣು ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮಂಗಳೂರಿನ ನಾಗುರಿ ಬಳಿ ನವೆಂಬರ್ 19ರಂದು ನಡೆದಿದ್ದ ಆಟೋದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಶಂಕಿತ ಉಗ್ರ ಶಾರಿಕ್ ನನ್ನು ಕಂಕನವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಶಾರಿಕ್ ಗೆ ಒಂದು ಕಣ್ಣು ತೆರೆಯಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಣ್ಣು ಕಾಣದ ಸ್ಥಿತಿಯಲ್ಲಿರುವುದರಿಂದ ಪೊಲೀಸರು ಆತನ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ.
ಇನ್ನು ಶಾರಿಕ್ ಕೈಗಳು ಸುಟ್ಟಿರುವುದರಿಂದ ಬರವಣಿಗೆ ಮೂಲಕ ಆತನಿಂದ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.