ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.
ರಾಯಚೂರಿನ ಗಿಲ್ಲೆಸಗೂರಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, ಈ ಮೂಲಕ 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಂಚಜನ್ಯ ಮೊಳಗಿಸಿದೆ. ಜನಸಂಕಲ್ಪ ಯಾತ್ರೆಗೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಮಂತ್ರಾಲಯ ಗುರುರಾಯರ ಮಠಕ್ಕೆ ಭೇಟಿ ನೀಡಿ ಗುರು ರಾಘವೇಂದ್ರಸ್ವಾಮಿಗಳ ಬೃಂದಾವನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ ಹಾಜರಿದ್ದರು.