ಬೆಳಗಾವಿ: ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನಾವು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿಎಂ ಮಾತನಾಡಿರುವ ವಿಷಯವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಸಿಎಂ ಮೇಲೆ ನಮಗೆ ಗೌರವವಿದೆ. ಸಿಎಂ ಬೊಮ್ಮಾಯಿ ಹೇಳಿದಂತೆ ಅಧಿವೇಶನಕ್ಕೆ ಬಂದಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಮಂತ್ರಿ ಆಗ್ತೀವಿ, ಬಿಡ್ತೀವಿ ಬೇರೆ ವಿಷಯ, ಜಿಲ್ಲೆಯಲ್ಲಿ ಕೆಲಸವಾಗಬೇಕು. ವಿಶೇಷವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.