alex Certify BIG NEWS: ಮಕ್ಕಳಲ್ಲಿ ಟೊಮೆಟೊ ಜ್ವರ ಭೀತಿ; ಎಚ್ಚರ ವಹಿಸುವಂತೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳಲ್ಲಿ ಟೊಮೆಟೊ ಜ್ವರ ಭೀತಿ; ಎಚ್ಚರ ವಹಿಸುವಂತೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ನಡುವೆಯೇ ಇದೀಗ ಮಕ್ಕಳಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಟೊಮೆಟೊ ಜ್ವರದ ಬಗ್ಗೆ ಎಚ್ಚರಿಕೆ ಮುಖ್ಯ. ಈ ಜ್ವರಕ್ಕೂ ಕೋವಿಡ್ ಗೂ ಯಾವುದೇ ಸಂಬಂಧವಿಲ್ಲ. ಆದರೆ ರೋಗ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.

ಕೇರಳದಲ್ಲಿ 80ಕ್ಕೂ ಹೆಚ್ಚು ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೇರಳದ ಅಂಚಲ್, ಆರ್ಯಂಕಾರು, ನೆಡವತೂರ್ ನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು, 5 ವರ್ಷದ ಮಕ್ಕಳಲ್ಲಿ ಚರ್ಮದ ತುರಿಕೆ, ಮೈಕೈ ನೋವು, ಕೀಲು ನೋವು, ಆಯಾಸ, ಚರ್ಮದ ಮೇಲೆ ಕೆಂಪು ಗುಳ್ಳೆಗಳು ಕಂಡು ಬರುತ್ತಿದ್ದು, ಇದು ಟೊಮೆಟೊ ಜ್ವರದ ಲಕ್ಷಣಗಳಾಗಿವೆ. ಈ ಹಿನ್ನೆಲೆಯಲ್ಲಿ ಇಂತಹ ಲಕ್ಷಣ ಕಂಡುಬಂದರೆ ನಿರ್ಲಕ್ಷ ವಹಿಸದೆ ತಕ್ಷಣ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...