
ಮೈಸೂರು: ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನ ಕುಕ್ಕರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದ್ದಾರೆ.
ಪಠ್ಯ ಪುಸ್ತಕಗಳಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಹೀಗಾಗಿ ಶಾಲಾ ಪಠ್ಯ ಪುಸ್ತಕದಲ್ಲಿ ಬದಲಾವಣೆಯಾದರೆ ಒಳ್ಳೆಯದು ಎಂದು ಹೇಳಿದ್ದಾರೆ.