ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ಇಳಿಮುಖವಾಗುತ್ತಿರು ಮಧ್ಯೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬ ಎಚ್ಚರಿಕೆ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಇದೀಗ ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ಆರಂಭವಾಗಿದೆ.
ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗಿಸಲಾಗುತ್ತಿದ್ದು, ದೆಹಲಿಯ ಏಮ್ಸ್ ಹಾಗೂ ಮಹಾರಾಷ್ಟ್ರದ ನಾಗ್ಪುರದಲ್ಲಿಯೂ ಪ್ರಯೋಗ ಆರಂಭವಾಗಿದೆ.
12-18 ವರ್ಷದ 175 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, 3 ಗ್ರೂಪ್ ಗಳಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ನಡೆದಿದೆ ಎಂದು ತಿಳಿದುಬಂದಿದೆ.