alex Certify BIG NEWS: ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು; ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿ; ಸಿಎಂ ತಾಕೀತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು; ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿ; ಸಿಎಂ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೈಕೋರ್ಟ್ ತೀರ್ಪಿಗಾಗಿ ಎಲ್ಲರೂ ಕಾಯೋಣ, ಯಾರೂ ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವುದು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಹಲವರು ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರೂ ಕೂಡ ಹೇಳಿಕೆಗಳನ್ನು ನೀಡಬಾರದು. ಇದರಿಂದ ಯಾವುದೇ ಲಾಭಗಳಿಲ್ಲ, ಹಿಜಾಬ್ ವಿಚಾರವಾಗಿ ಅನಗತ್ಯ ಪ್ರತಿಕ್ರಿಯೆ ನೀಡುವುದನ್ನು ಬಿಡಿ ಎಂದು ಮನವಿ ಮಾಡಿದ್ದಾರೆ.

ಮಕ್ಕಳಲ್ಲಿ ಮೊದಲಿನಂತೆ ಸೌಹಾರ್ದತೆ , ಶಿಸ್ತು ಮೂಡಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು ಹಾಗಾಗಿ ಅನಗತ್ಯ ಹೇಳಿಕೆಗಳನ್ನು ನೀಡುವುದು, ಗೊಂದಲ ಮೂಡಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ರಾಜಕೀಯ ನಾಯಕರಿಗೂ ಪರೋಕ್ಷ ಸಲಹೆ ನೀಡಿದ್ದಾರೆ.

ಇನ್ನು ಶಾಲಾ-ಕಾಲೇಜುಗಳಿಗೆ ರಜೆ ಮುಂದುವರೆಸುವ ಬಗ್ಗೆ ಮಾತನಾಡಿದ ಸಿಎಂ ಇಂದು ಸಂಜೆ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಯಲಿದೆ. ಸಭೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...