ದಾವಣಗೆರೆ: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾದ ರಾಜ್ಯದ ಮೆಡಿಕಲ್ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸ್ವಗ್ರಾಮದಲ್ಲಿ ನಡೆಯುತಿದ್ದು, ಮಗನ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ.
ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದಲ್ಲಿ ನವೀನ್ ಮೃತದೇಹದ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆ ಬಳಿಕ ಮೃತದೇಹವನ್ನು ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ದಾನ ಮಾಡಲಿದ್ದಾರೆ. ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳ ಸಂಶೋಧನೆಗೆ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಮೂಲಕ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಮಗನ ಸಾವಿನಲ್ಲಿಯೂ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.
ಕೋವಿಶೀಲ್ಡ್ ಎರಡನೇ ಡೋಸ್ ಅಂತರ ಕಡಿಮೆ ಮಾಡುವಂತೆ ತಜ್ಞರ ಸಲಹೆ
ಮೆಡಿಕಲ್ ಕಾಲೇಜಿಗೆ ಮೃತದೇಹ ಹಸ್ತಾಂತರದ ಬಳಿಕ ಕಾಲೇಜಿನಲ್ಲಿಯೂ 2 ಗಂಟೆಗಳ ಕಾಲ ಸಾರ್ವಜನಿಕರಿಗೆ ನವೀನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
