ಮಂಡ್ಯ: ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ವಿರುದ್ಧ ಸಚಿವ ಎಸ್.ಟಿ.ಸೋಮಶೇಖರ್ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಸಚಿವರು, ಅತ್ಯಾಚಾರ ಆರೋಪಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಬೆಂಗಳೂರು ನಗರ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ವಿರುದ್ಧ ಅತ್ಯಾಚಾರ, ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಅಂತಹ ವ್ಯಕ್ತಿಗೆ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಿಮ್ಮ ʼಆಧಾರ್ʼ ಕಾರ್ಡ್ ಮೇಲೆ ಪಡೆಯಲಾಗಿದೆಯಾ ಸಿಮ್…? ಪತ್ತೆ ಹಚ್ಚಲು ಹೀಗೆ ಮಾಡಿ
5 ಕೋಟಿಯಿಂದ 50 ಕೋಟಿ ರೂಪಾಯಿ ವಂಚನೆ ನಡೆಸಿರುವ ಆರೋಪದಲ್ಲಿ ಕೆ ಜಿ ಎಫ್ ಬಾಬು ಮೂರು ತಿಂಗಳು ಜೈಲು ವಾಸ ಅನುಭವಿಸಿದ್ದರು. ಜೈಲಿನಿಂದ ಬಿಡುಗಡೆಯಾಗಿ ಬಂದು ಅತ್ಯಾಚಾರ ನಡೆಸಿದ್ದರು ಎಂಬ ಆರೋಪವಿದೆ. ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದಾರೆ ಎಂದು ಸ್ವತಃ ಪತ್ನಿಯೇ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಎಫ್ ಐಆರ್ ಕೂಡ ದಾಖಲಾಗಿದೆ ಅಂತಹ ವ್ಯಕ್ತಿಗೆ ಕಾಂಗ್ರೆಸ್ ಪರಿಷತ್ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ.