ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಹಣ, ಬೆಳ್ಳಿ, ಬಂಗಾರ, ಸೀರೆ, ಕುಕ್ಕರ್, ಪಾತ್ರೆ ಹೀಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಮತದಾರರಿಗೆ ಹಂಚಲು ತಂದಿದ್ದ ಬರೋಬ್ಬರಿ 1.47 ಕೋಟಿ ಮೌಲ್ಯದ ಚಿನ್ನ ಲೇಪಿತ ಒಡವೆಗಳನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹಲಸೂರು ಗೇಟ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಚಿನ್ನ ಲೇಪಿತ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಸಿ.ವಿ.ರಾಮನ್ ನಗರ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ಗೋಲ್ಡ್ ಕೋಟೆಡ್ ಸರ, ಉಂಗುರ, ಕಿವಿಯೋಲೆ , ಬ್ರೇಸ್ ಲೇಟ್, ಬಳೆಗಳು ಸೇರಿದಂತೆ 8 ಕೆಜಿಗೂ ಅಧಿಕ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.