ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಅಕ್ರಮ ಪ್ರಕರಣದ ಬೆನ್ನಲ್ಲೇ ಮತದಾರರ ಪಟ್ಟಿಯಿಂದ ಹೆಸರು ಡಿಲಿಟ್ ಆದವರ ಹೆಸರು ಸೇರ್ಪಡೆಗೆ ಬಿಬಿಎಂಪಿ ಹೊಸ ಅಭಿಯಾನ ಆರಂಭಿಸಿದೆ.
ವೋಟರ್ ಐಡಿ ಅಕ್ರಮದಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಕ್ರಮ ಕೈಗೊಂಡ ಬೆನ್ನಲ್ಲೇ ಡಿಜಿಟಲ್ ಸಮೀಕ್ಷಾ ಆಪ್ ಅಭಿವೃದ್ಧಿಪಡಿಸಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಬಿಬಿಎಂಪಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023 ಅಭಿಯಾನ ಆರಂಭಿಸಿದೆ.
ವೋಟರ್ ಐಡಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ ನೀಡಿ ಡಿಸೆಂಬರ್ 8ರವರೆಗೆ ಬಿಬಿಎಂಪಿ ವಿಶೇಷ ಅಭಿಯಾನ ಕೈಗೊಂಡಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು, ತಿದ್ದುಪಡಿ, ಸ್ಥಳಾಂತರಗೊಂಡಿದ್ದಲ್ಲಿ ನಮೂನೆ 6, 6ಎ, 7,8 ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 20ರಿಂದ ಡಿಸೆಂಬರ್ 3ರವರೆಗೆ ಹಾಗೂ ಡಿ.8ರಂದು ವಿಶೇಷ ಅಭಿಯಾನ ನಡೆಯಲಿದೆ.