ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ದಿನಾಂಕ ನವೆಂಬರ್ 9 ರಿಂದ ಡಿಸೆಂಬರ್ 12ರವರೆಗೆ ನಡೆಸಲಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಯಸಿದಲ್ಲಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಅಥವಾ www.nvsp.in ವೆಬ್ ಸೈಟ್ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅಥವಾ ಬೂತ್ ಮತದ ಅಧಿಕಾರಿ ಅಥವಾ ಮತದಾರರ ನೋಂದಣಿ ಕಚೇರಿಗೆ ಭೇಟಿ ಮಾಡಿ ಈ ಕಾರ್ಯವನ್ನು ಮಾಡಬಹುದಾಗಿದೆ.
ಅಲ್ಲದೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಈಗ ವರ್ಷಕ್ಕೆ ನಾಲ್ಕು ಬಾರಿ ಅರ್ಹತಾ ದಿನಾಂಕಗಳಿದ್ದು, ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ರಂದು ಇದನ್ನು ಮಾಡಬಹುದಾಗಿದೆ. ಮತದಾರರ ಸಹಾಯವಾಣಿ 1950 ಕ್ಕೆ ಕರೆ ಮಾಡಿ ಮಾಹಿತಿಯನ್ನೂ ಪಡೆಯಬಹುದಾಗಿದೆ.
ಅಲ್ಲದೆ ವಿಶೇಷ ನೋಂದಣಿ ಅಭಿಯಾನದ ದಿನಾಂಕಗಳನ್ನು ಘೋಷಿಸಲಾಗಿದ್ದು, ನವೆಂಬರ್ 12ರ ಶನಿವಾರ, ನವೆಂಬರ್ 20ರ ಭಾನುವಾರ, ಡಿಸೆಂಬರ್ 3ರ ಶನಿವಾರ, ಡಿಸೆಂಬರ್ 4ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ಸಮೀಪದ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಹುದಾಗಿದೆ.