ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ, ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ದುರ್ಬಳಕೆ ಮಾಡಿ ಮತದಾರರ ಹೆಸರು ತಿದ್ದುಪಡಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ವೋಟರ್ ಐಡಿ ಅಕ್ರಮವೆಸಗಲಾಗಿದೆ. ಇದರ ಹಿಂದೆ ಸಚಿವ ಅಶ್ವತ್ಥ ನಾರಾಯನ ಕೈವಾಡವಿದೆ. ಮಾಹಿತಿ ಕಲೆ ಹಾಕಲು ಎರಡು ಸಂಸ್ಥೆಗಳಿಗೆ ಅನುಮತಿ ನೀಡಲಾಗಿದೆ. ಡಿಎಪಿ ಹೊಂಬಾಳೆ ಪ್ರೈ.ಲಿ. ಚೆಲುಮೆ ಎಂಟರ್ ಪ್ರೈಸಸ್ ಗೆ ನೀಡಲಾಗಿದೆ. ಮತದಾರ ಮಾಹಿತಿ ಕಳ್ಳತನ ಮಾಡಲು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ ನಾರಾಯಣ ಅವರಿಗೂ ಈ ಸಂಸ್ಥೆಗಳಿಗೂ ಏನು ಸಂಬಂದ. ಬೊಮ್ಮಾಯಿ ಅವರು ಸಿಎಂ ಆದ್ಮೇಲೆ ಸಚಿವರು ಏನೆಲ್ಲ ಆಟವಾಡುತ್ತಿದ್ದಾರೆ. ಮತದಾರರ ಪಟ್ಟಿ ದುರ್ಬಳಕೆ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.