alex Certify BIG NEWS: ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತುಂಗಾ ದಡದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಮಜೀದ್ ಅಬ್ದುಲ್ ರೆಹಮಾನ್ ಹಾಗೂ ನದೀಮ್ ಅಹ್ಮದ್ ಬಂಧಿತ ಆರೋಪಿಗಳು. ಬಂಧಿತರು ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ಟ್ರಯಲ್ ಬ್ಲಾಸ್ಟ್ ಪ್ರಕರಣ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ತನಿಖೆ ವೇಳೆ ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಐಸಿಸ್ ಒಳ ಸಂಚು ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...