ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ದಿನ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ತಟ್ಟುತ್ತಿದೆ. ಇತ್ತೀಚೆಗೆ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ನಾಲ್ಕು ಸಾರಿಗೆ ನಿಗಮದ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.
ನಾಳೆ ಫೆ.6ರಂದು ಸಾರಿಗೆ ನೌಕರರು ತಮ್ಮ ಕುಟುಂಬ ಸಮೇತ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ವೇತನ ಹೆಚ್ಚಳ, ವಜಾಗೊಂಡಿರುವ ನೌಕರರನ್ನು ಷರತ್ತುಗಳಿಲ್ಲದೇ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು, ಮುಷ್ಕರದ ವೇಳೆ ಸಾರಿಗೆ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಬೇಕು. ನಿವೃತ್ತಿಯಾಗಿರುವ ನೌಕರರಿಗೆ ಕೊಡಬೇಕಾಗಿರುವ ಬಾಕಿ ಹಣ ತಕ್ಷಣ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಅಲ್ಲದೇ ಸಾರಿಗೆ ನೌಕರರಿಗೆ ಉತ್ತಮ ಆರೋಗ್ಯ ಯೋಜನೆ ಜಾರಿಗೊಳಿಸುವಂತೆಯೂ ಒತ್ತಾಯಿಸಿದ್ದಾರೆ.