ಮಂಗಳೂರು: ರಾಜ್ಯದಲ್ಲಿ ತಣ್ಣಗಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಮತ್ತೆ ಆರಂಭವಾಗಿದ್ದು, ಮಂಗಳೂರಿನ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಪ್ರತಿಭಟನೆ ಪ್ರಾರಂಭಿಸಿದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲಿಗಾಗಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಹಂಪನಕಟ್ಟೆಯಲ್ಲಿ ಸರ್ಕಾರಿ ಪದವಿ ಕಾಲೇಜಿನ ಕ್ಯಾಂಪಸ್ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಿಜಾಬ್ ಹಾಗೂ ಕೇಸರಿ ಶಾಲಿಗೆ ಒತ್ತಾಯಿಸಿ ಹೋರಾಟ ಆರಂಭವಿಸಿದ್ದಾರೆ.
ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಆದರೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಆಡಳಿತ ಮಂಡಳಿ ಒಪ್ಪಿರಲಿಲ್ಲ. ಇದೀಗ ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಹಿಂದೂ ವಿದ್ಯಾರ್ಥಿಗಳು ಕೂಡ ನಮಗೂ ಕೇಸರಿ ಶಾಲು ಧರಿಸಲು ಅವಕಾಶ ಕೊಡುವಂತೆ ಒತ್ತಾಯಿಸಿದ್ದಾರೆ.