alex Certify BIG NEWS: ಮತ್ತೆ ಇಬ್ಬರಲ್ಲಿ ಒಮಿಕ್ರಾನ್ ಪತ್ತೆ; ರೂಪಾಂತರಿ ಸೋಂಕಿತರ ಸಂಖ್ಯೆ 25 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಇಬ್ಬರಲ್ಲಿ ಒಮಿಕ್ರಾನ್ ಪತ್ತೆ; ರೂಪಾಂತರಿ ಸೋಂಕಿತರ ಸಂಖ್ಯೆ 25 ಕ್ಕೇರಿಕೆ

ನವದೆಹಲಿ: ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೆ ಇಬ್ಬರಲ್ಲಿ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಗುಜರಾತ್ ನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಇವರಲ್ಲಿ ಓರ್ವ ಡಿಸೆಂಬರ್ 4ರಂದು ದಕ್ಷಿಣ ಆಫ್ರಿಕಾದಿಂದ ಜಿಂಬಾಬ್ವೆಗೆ ಬಂದು ಅಲ್ಲಿಂದ ಗುಜರಾತ್ ನ ಜಾಮ್ ನಗರಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿದೆ.

ಒಮಿಕ್ರಾನ್ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ಮತ್ತೋರ್ವನಲ್ಲೂ ವೈರಸ್ ಪತ್ತೆಯಾಗಿದ್ದು, ಇಬ್ಬರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ಸೋಂಕಿತ ವ್ಯಕ್ತಿ 2 ಡೋಸ್ ಲಸಿಕೆ ಪಡೆದಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...