ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 43,733 ಜನರಲ್ಲಿ ಸೋಂಕು ಪತ್ತೆಯಾಗಿದೆ. ನಿನ್ನೆಯಷ್ಟೇ ಭಾರಿ ಇಳಿಕೆ ಕಂಡಿದ್ದ ಸೋಂಕಿತರ ಸಂಖ್ಯೆ 24ಗಂಟೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,06,63,665ಕ್ಕೆ ಏರಿಕೆಯಾಗಿದೆ.
ಕೋವಿಡ್ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು. ಕಳೆದ 24 ಗಂಟೆಯಲ್ಲಿ 930 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,04,211ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,59,920ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,99,534 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 47,240 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಿಕವರಿ ರೇಟ್ 97.18%ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನದಲ್ಲಿ 19,07,216 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 42,33,32,097 ಜನರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 36,13,23,548 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.